Latest

ಮುಖಾಮುಖಿ ಡಿಕ್ಕಿಯಾದ ಬೈಕ್ ಗಳು; ಮೂವರು ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಭಾರಿ ಮಳೆಯ ನಡುವೆಯೇ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಬಳಿಯ ಹೂವಿನಬಾವಿಯಲ್ಲಿ ನಡೆದಿದೆ.

ವೇಗವಾಗಿ ಬಂದ ಎರಡು ಬೈಕ್ ಗಳು ಪರಸ್ಪರ ಡಿಕ್ಕಿಹೊಡೆದಿವೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಶಿರೋಳ್ಳಿಯ ಜಗನ್ನಾಥ್ ಚಕ್ಕುಲಿ (35), ಮೆಹಬೂಬ್ ಅಲಿ (45) ಹಾಗೂ ಶಾದಿಪುರದ ಶ್ರೀಕಾಂತ್ (30) ಮೃತ ವ್ಯಕ್ತಿಗಳು. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸ್ಥಳಕ್ಕೆ ಸುಲೇಪೇಠ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಶಾಸಕರು ಹಾಗೂ ಸ್ವಾಮೀಜಿಯೊಬ್ಬರಿಗೆ ಕೊಲೆ ಬೆದರಿಕೆ

Related Articles

Back to top button