Kannada NewsLatest

*ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರದ ಅನುಮತಿ; ಇದು ಉತ್ತರ ಕರ್ನಾಟಕದ ಜನತೆಗೆ ಪ್ರಧಾನಿ ಮೋದಿ ಕೊಡುಗೆ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಜಲಶಕ್ತಿ ಆಯೋಗ ಸಮ್ಮತಿ ನೀಡಿರುವ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಉತ್ತರ ಕರ್ನಾಟಕ ಭಾಗದ ಪ್ರತಿಷ್ಠೆಯ ಯೋಜನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕಳಸಾ-ಬಂಡೂರಿ ನಾಲಾ ಯೋಜನೆಯ ಡಿಪಿಆರ್ ಗೆ ಪ್ರಧಾನಿ ನರೇಂದ್ರ ಮೋದಿಯವರು ಅನುಮತಿ ನೀಡಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದ ಜನತೆಗೆ ಪ್ರಧಾನಿ ಮೋದಿಯವರ ಕೊಡುಗೆಯಾಗಿದೆ. ಯೋಜನೆಗೆ ಅನುಮತಿ ನೀಡಿದ್ದಕ್ಕಾಗಿ ಪ್ರಧಾನಿ ಮೋದಿ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಸೇಖಾವತ್, ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

ಈ ಯೋಜನೆಗಾಗಿ 2002ರಿಂದ ಕಳಸಾದಿಂದ ಡೈವರ್ಟ್ ಮಾಡಲು ಚರ್ಚಿಸಲಾಗಿತ್ತು. ಆದರೆ ಗೋವಾ ಸರ್ಕಾರ ಯೋಜನೆಗೆ ತಗಾದೆ ತೆಗೆದಿತ್ತು. ಈಗ ಕಳಸಾ-ಬಂಡೂರಿ ಯೋಜನೆಯ ಡಿಪಿಆರ್ ಗೆ ಕೇಂದ್ರ ಜಲಶಕ್ತಿ ಆಯೋಗ ಅನುಮತಿ ನೀಡಿದೆ. ತಕ್ಷಣ ಡಿಪಿಆರ್ ಸಿದ್ಧಪಡಿಸಿ ಕಾರ್ಯಯೋಜನೆ ಆರಂಭಿಸುತ್ತೇವೆ. ನಾವೇ ಅಡಿಗಲ್ಲು ಹಾಕಿ ಪೂಜೆ ನೆರವೇರಿಸುತ್ತೇವೆ ಎಂದು ತಿಳಿಸಿದರು.

*ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ*

https://pragati.taskdun.com/kalasabanduri-water-projectcentral-water-commissionprahlad-joshi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button