Latest

*ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ; ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಕಳಸಾ ಬಂಡೂರಿಗೆ ಯೋಜನೆಗೆ ಈ ಹಿಂದೆ ನಾವೂ ಕೂಡ ಹೋರಾಟ ನಡೆಸಿದ್ದೆವು. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಅತ್ಯಂತ ಶ್ರಮ ಹಾಕಿದೆ. ಸಿಎಂ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಕಳಸಾಬಂಡೂರಿ ನಾಲಾ ಯೋಜನೆ ಕರ್ನಾಟಕಕ್ಕೆ ಅತ್ಯಂತ ಅವಶ್ಯವಾಗಿದ್ದು, ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

*2022-23ನೇ ಸಾಲಿನ ಪೂರಕ ಬಜೆಟ್ ಮಂಡನೆ*

https://pragati.taskdun.com/supplementary-budget2022-23cm-basavaraj-bommaibelagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button