
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆರು ತಂಡ ರಚನೆ ಮಾಡಲಾಗಿದೆ.
ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜುಲೈ 23ರಂದು ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದವು. ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ಗಳು ಪತ್ತೆಯಾಗಿದ್ದು ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೀಗ ಈ ಪ್ರಕರಣದ ತನಿಖೆಗೆ ಪೊಲೀಸರ ಆರು ತಂಡಗಳನ್ನು ರಚಿಸಲಾಗಿದೆ. ಇನ್ನು ಸಿಸಿಬಿ, ಇಂಟಲಿಜನ್ಸ್, ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.