Belagavi NewsBelgaum NewsKarnataka NewsLatestPolitics
*ರಸ್ತೆ ಅಭಿವೃದ್ಧಿ, ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನ ರಸ್ತೆ ನಿರ್ಮಾಣ ಹಾಗೂ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ 2 ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಗ್ರಾಮೀಣ ಕ್ಷೇತ್ರದ ಅಭಿವೃದ್ದಿ ನಿರಂತರ. ಮೂಲಭೂತ ಸೌಲಭ್ಯಗಳೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜನರು ಅವರ ಬೆನ್ನಿಗೆ ನಿಲ್ಲುವ ಮೂಲಕ ಬೆಬಲಿಸಬೇಕು ಎಂದು ಮೃಣಾಲ ಹೆಬ್ಬಾಳಕರ್ ಮನವಿ ಮಾಡಿದರು.
ಈ ವೇಳೆ ಗ್ರಾಮದ ಹಿರಿಯರು, ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಮಹೇಶ ಪಾಟೀಲ, ಸಂಜಯ ಪಾಟೀಲ, ಬಾಳು ದೇಸೂರಕರ್ ಮುಂತಾದವರು ಉಪಸ್ಥಿತರಿದ್ದರು.



