
ಪ್ರಗತಿವಾಹಿನಿ ಸುದ್ದಿ: ಕಳ್ಳಭಟ್ಟಿ ಸಾರಾಯಿ ಸೇವಿಸಿ ಮಹಿಳೆಯರು ಸೇರಿ 34 ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಲ್ಲುಕುರುಚಿಯಲ್ಲಿ ನಡೆದಿದೆ.
60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಅವರಲ್ಲಿ 25 ಜನರ ಸ್ಥಿತಿ ಗಂಭೀರವಾಗಿದೆ. ಕಳ್ಳಭಟ್ಟಿ ಸೇವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಈವರೆಗೆ 34 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದ ಬೆನ್ನಲ್ಲೇ ಕಲ್ಲುಕುರುಚಿ ಎಸ್ ಪಿ ಸಮಯ ಸಿಂಗ್ ಮೀನಾ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಅಲ್ಲದೇ 9 ಪೊಲೀಸರನ್ನು ಅಮಾನತು ಮಾಡಲಾಗಿದೆ. ಸಿಎಂ ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರ ಪ್ರಕರಣವನ್ನು ಸಿಬಿ-ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ