Latest

ಆಧುನಿಕ ಭಗೀರಥ, ಪರಿಸರ ಪ್ರೇಮಿ ಕಲ್ಮನೆ ಕಾಮೇಗೌಡ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಆಧುನಿಕ ಭಗೀರಥ ಖ್ಯಾತಿಯ ರೈತ, ಪರಿಸರ ಪ್ರೇಮಿ ಕಲ್ಮನೆ ಕಾಮೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗಾಗಿ ಕಾಮೇಗೌಡ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಸಾವಿರಾರು ಗಿಡಗಳನ್ನು ನೆಟ್ಟು, ಬೆಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿ ಮೆರೆದಿದ್ದರು.

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಮೇಗೌಡ ಅವರ ಪರಿಸರ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೇ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ನಿನ್ನೆ ತಡರಾತ್ರಿ ಕಾಮೇಗೌಡ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ತೀವ್ರಹೊಟ್ಟೆ ನೋವಿನಿಂದ ಬಳಲಿದ್ದಾರೆ. ಬಳಿಕ ಏಕಾಏಕಿ ವಾಂತಿ ಶುರುವಾಗಿದ್ದು, ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಾಮೇಗೌಡ ನಿಧನಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ

Home add -Advt

ಇನ್ನೂ ಎರಡು ದಿನ ಭಾರಿ ಮಳೆ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

https://pragati.taskdun.com/latest/heavy-rain2-dayskarnataka/

Related Articles

Back to top button