Cancer Hospital 2
Beereshwara 36
LaxmiTai 5

*ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ*

Anvekar 3

ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2023 ಅಂಗವಾಗಿ ಕಲಬುರ್ಗಿಯ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದರು.

ಇಂತಹ ವಿಶೇಷ ಸಂದರ್ಭದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಅವಕಾಶ ಲಭಿಸಿದ್ದು ಧನ್ಯತೆಯ ಭಾವ ಮೂಡಿಸಿದೆ. ಹಾಗೂ ಈ ಭಾಗದ ಅಭಿವೃದ್ಧಿಯ ಸಂಕಲ್ಪವನ್ನು ಇನ್ನಷ್ಟು ಬಲಪಡಿಸಿದೆ ಎಂದರು.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದರೂ ಹೈದರಾಬಾದ್ ನಿಜಾಮರ ಆಳ್ವಿಯಲ್ಲಿದ್ದ ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸ್ವಾತಂತ್ರ್ಯದ ಬೆಳಕು ಬಂದಿದ್ದು ಒಂದು ವರ್ಷದ ನಂತರ.

ರಮಾನಂದ ತೀರ್ಥರೊಂದಿಗೆ ಅಪ್ಪಾರಾವ್ ಪಾಟೀಲ್, ಚಂದ್ರಶೇಖರ್ ಪಾಟೀಲ್ ಸೇರಿಕೊಂಡು ಚಳವಳಿಯನ್ನು ಇನ್ನಷ್ಟು ತೀವ್ರಗೊಳಿಸಿದರು. ಹೈದರಾಬಾದ್ ಕರ್ನಾಟಕ ವಿಮೋಚನೆ ಹೊಂದಬೇಕಾದರೆ ಒಗ್ಗಟ್ಟಿನ ಹೋರಾಟ ಅಗತ್ಯ ಎಂದು ಜನರಿಗೆ ಮನವರಿಕೆ ಮಾಡಿಕೊಡತೊಡಗಿದರು.

ಆ ಸಂದರ್ಭದಲ್ಲಿ ಸರ್ವಶ್ರೀ ಸರದಾರ ಶರಣಗೌಡ ಇನಾಂದಾರ, ರಾಜಾ ವೆಂಕಟಪ್ಪ ನಾಯಕ, ದತ್ತಾತ್ರೇಯ ಅವರಾದಿ, ಅಳವಂಡಿ ಶಿವಮೂರ್ತಿಸ್ವಾಮಿ, ಮಟಮಾರಿ ನಾಗಪ್ಪಾ, ನಾರಾಯಣರಾವ ಕಾನಿಹಾಳ, ರಾಮಚಂದ್ರ ವೀರಪ್ಪ, ಎ.ವಿ. ಪಾಟೀಲ್, ಆರ್.ವಿ. ಬಿಡ್ಡಪ್ಪ, ಹಕ್ಕಿಕತರಾವ್ ಚಿಟಗುಪ್ಪಕರ, ಚಂದ್ರಶೇಖರ್ ಪಾಟೀಲ್, ರಾಮಾಚಾರ, ಡಾ.ಚರ್ಚಿಹಾಳ ಮಠ, ಅಮರಸಿಂಹ ರಾಠೋಡ, ಪುಂಡಲಿಕಪ್ಪ ಜ್ಞಾನಮೂಠೆ, ಗೋವಿಂದ್ ಭಾಯ್, ಪಿ.ವಿ, ನರಸಿಂಹರಾವ್, ಜೆ.ಕೆ. ಪ್ರಾಣೇಶಾಚಾರ್ಯ, ಡಾ. ಮೇಲುಕೋಟಿ, ಪ್ರೊ. ಭಾವುಸಾಹೇಬ್ ದೇವುಳಗಾಂವಕರ್, ಡಾ.ವಿ.ಪಿ. ದೇವುಳಗಾಂವಕರ್, ಮಲ್ಲಪ್ಪ ಕೊಲ್ಲೂರು, ಮುಂಡರಗಿ ಭೀಮರಾಯ, ಪ್ರೇಮಿಲಾಬಾಯಿ ಪಟ್ಟಣಕರ್, ಚನ್ನಬಸಪ್ಪ ಕುಳಗೇರಿ, ದಾಸರಾವ್ ಮುಕ್ತೇದಾರ್, ಪಂಡಿತ್ ತಾರಾನಾಥ್, ಶಂಕರಶೆಟ್ಟಿ ಪಾಟೀಲ್ ಕಮಲಾಪುರ, ಎನ್.ಕೆ. ಸರಾಫ್, ಚಟ್ನಳ್ಳಿ ವೀರೂಪಾಕ್ಷಪ್ಪ, ವೀರೂಪಾಕ್ಷಪ್ಪ ರಾಜನಕೋಳೂರು, ಜಯರಾಮಚಾರ್ಯ ತೀರ್ಥನಕೇಸರಿ, ಅನ್ನದಾನಯ್ಯ ಪುರಾಣಿಕ್, ನರಸಿಂಗ್‍ರಾವ್ ಮಾನವಿ, ಕಾಶೀನಾಥ್ ರಾವ್, ಜಗನ್ನಾಥ್‍ರಾವ್ ಚಂಡ್ರಕಿ, ವಿಶ್ವನಾಥರೆಡ್ಡಿ ಮುದ್ನಾಳ್, ವಿದ್ಯಾಧರ ಗುರುಜೀ, ಭೀಮರಾವ್ ಪಟವರ್ಧನ್, ವೀರೂಪಾಕ್ಷಯ್ಯ ಸ್ವಾಮಿ, ನೀಲಕಂಠಪ್ಪ ಪಾಟೀಲ್, ವೀರಶೆಟ್ಟಪ್ಪ ವನಕೆ, ನರಸಿಂಗರಾವ್ ಬಾಚಾ, ವಿಜಯಕುಮಾರ ಚಿಟಗುಪ್ಪಾ ಸೇರಿದಂತೆ ಇನ್ನೂ ಅನೇಕ ಹೋರಾಟಗಾರರು ನಿಜಾಮನ ವಿರುದ್ದ ಸೆಡ್ಡು ಹೊಡೆದು ನಿಂತರು.

ಸ್ವಾಮಿ ರಮಾನಂದ ತೀರ್ಥರು ಹಾಗೂ ಅಸಂಖ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭ ಭಾಯಿ ಪಟೇಲರ ಸಂಕಲ್ಪಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು.

ಇದಕ್ಕಾಗಿ ಹೋರಾಡಿದ ಎಲ್ಲ ಮಹನೀಯರನ್ನು ನಾನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸ್ಮರಿಸುತ್ತೇನೆ ಎಂದರು.

ಕನ್ನಡ ಭಾಷೆ ಸಾಹಿತ್ಯ, ಸಂಸ್ಕøತಿ, ಕಲೆ, ಧರ್ಮ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿದ ಈ ಪ್ರದೇಶ ವಿಶ್ವವೇ ನಿಬ್ಬೆರಗಾಗುವಂತಹ ಜಗಜ್ಯೋತಿ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮಾದರಿ ಆಡಳಿತಕ್ಕೆ ಭದ್ರ ಬುನಾದಿ ಹಾಕಿದ ಪವಿತ್ರ ಭೂಮಿಯಾಗಿದೆ. ಕಲ್ಯಾಣ ಚಾಲುಕ್ಯರು, ಬಹಮನಿ ಸುಲ್ತಾನರು, ರಾಷ್ಟ್ರಕೂಟರ ಆಳ್ವಿಕೆಯ ಭವ್ಯ ಪರಂಪರೆ ಹೊಂದಿದ ಪ್ರದೇಶ ಇದಾಗಿದೆ.

ಕನ್ನಡದ ಮೊಟ್ಟ ಮೊದಲ ಉಪಲಬ್ಧ ಗ್ರಂಥ “ಕವಿರಾಜ ಮಾರ್ಗ” ನೀಡಿದ ಅಮೋಘವರ್ಷ ನೃಪತುಂಗನ ನಾಡು ಇದಾಗಿದೆ. ಸೂಫಿ-ಸಂತರ ಈ ಬೀಡು, ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ.

ಇತ್ತೀಚೆಗೆ ನಡೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ನಮಗೆ ಅಭೂತಪೂರ್ವ ಬಹುಮತ ನೀಡಿ ರಾಜ್ಯದಲ್ಲಿ “ಜನಪರ ಸರ್ಕಾರ” ಸ್ಥಾಪಿಸಲು ಕಾರಣೀಭೂತರಾಗಿದ್ದಾರೆ. ಇದಕ್ಕಾಗಿ ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ನಾಡಿನ ಜನತೆಗೆ ಧನ್ಯವಾದ ಅರ್ಪಿಸಲು ಇಚ್ಛಿಸುತ್ತೇನೆ.

ಪ್ರಾದೇಶಿಕ ಅಸಮಾನತೆ ನಿವಾರಣೆ ನಿಟ್ಟಿನಲ್ಲಿ ನಿಜಾಮನ ಆಳ್ವಿಕೆಯಲ್ಲಿದ್ದ ಕಲಬುರಗಿ, ಬೀದರ ಹಾಗೂ ರಾಯಚೂರು, ಹಾಗೂ ಮದ್ರಾಸ್ ಪ್ರಾಂತ್ಯದಲ್ಲಿನ ಬಳ್ಳಾರಿ ಜಿಲ್ಲೆ ಒಳಗೊಂಡಂತೆ ದಿ. ಎನ್. ಧರ್ಮಸಿಂಗ್ ವರದಿಯನ್ವಯ 1990ರಲ್ಲಿ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿತ್ತು. ಆ ಮೂಲಕ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ರಾಜ್ಯ ಸರ್ಕಾರ ವಿಶೇಷ ನಿಧಿ ನೀಡಲಾಗಿತ್ತಾದರೂ ನಿರೀಕ್ಷಿತ ಮಟ್ಟದಲ್ಲಿ ಸಾಕಾರವಾಗಲಿಲ್ಲ.

Emergency Service

ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನದ 371ನೇ ಪರಿಚ್ಛೇದಕ್ಕೆ ತಿದ್ದುಪಡಿಗೆ ಒತ್ತಾಯಿಸಿ ನಡೆದ ಹೋರಾಟಕ್ಕೆ ಇದು ನಾಂದಿಯಾಯಿತು.

ಹಲವು ದಶಕಗಳ ತೀವ್ರ ಹೋರಾಟ ಹಾಗೂ ಈ ಭಾಗದ ಹಿರಿಯ ರಾಜಕಾರಣಿಗಳಾದ ಮಾಜಿ ಕೇಂದ್ರ ಸಚಿವರಾಗಿದ್ದ ಡಾ. ಮಲ್ಲಿಕಾರ್ಜುನ್ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ದಿ.ಎನ್. ಧರಂಸಿಂಗ್ ಅವರ ಅವಿರತ ಪ್ರಯತ್ನದಿಂದಾಗಿ ಕಲಂ 371ಕ್ಕೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿತು.

ಆದರೆ, ಎನ್.ಡಿ.ಎ ಸರ್ಕಾರ ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಪ್ರಸ್ತಾವನೆಯನ್ನು ತಿರಸ್ಕರಿಸಿತು. ಆದರೆ, ಡಾ. ಮಲ್ಲಿಕಾರ್ಜುನ ಖರ್ಗೆ ಅವರ ನಿರಂತರ ಪ್ರಯತ್ನದಿಂದ ಮುಂದೆ ಅಧಿಕಾರಕ್ಕೆ ಬಂದ ಮನಮೋಹನ್ ಸಿಂಗ್ ನೇತೃತ್ವದ ಅಂದಿನ ಯು.ಪಿ.ಎ ಸರ್ಕಾರ ಡಿಸೆಂಬರ್ 2012ರಲ್ಲಿ ಸಂವಿಧಾನ ಕಲಂ 371 ಕ್ಕೆ ತಿದ್ದುಪಡಿ ತಂದು 371 (ಜೆ) ಪರಿಚ್ಚೇಧ ಸೇರ್ಪಡೆ ಮಾಡಲಾಯಿತು. ರಾಷ್ಟ್ರಪತಿಗಳ ಅಂಕಿತದೊಂದಿಗೆ ಇದು ದಿನಾಂಕ:01-01-2013 ರಿಂದ ಜಾರಿಗೆ ಬಂತು.

ಸಂವಿಧಾನದಲ್ಲಿ 371 (ಜೆ) ಪರಿಚ್ಛೇದ ಸೇರ್ಪಡೆಯೊಂದಿಗೆ ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರೆತಂತಾಯಿತು. 2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೈದ್ರಾಬಾದ್ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡುವ ಪ್ರಯತ್ನಕ್ಕೆ ಚಾಲನೆ ನೀಡಲಾಯಿತು. ಜೊತೆಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಜಾರಿ ಮಾಡುವ ಮೂಲಕ ಶತಮಾನಗಳಿಂದ ಹಿಂದುಳಿದ ಈ ಭಾಗದ ಜನರ ಬದುಕಿನಲ್ಲಿ ಹಲವು ಬದಲಾವಣೆಗಳಿಗೆ ಕಾರಣವಾಯಿತು.

ಪ್ರದೇಶದ ಅಭಿವೃದ್ಧಿ ವೆಚ್ಚಕ್ಕಾಗಿ ನಿಧಿಯ ಸಮಾನ ಹಂಚಿಕೆ, ಈ ಪ್ರದೇಶಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ವೃತ್ತಿಪರ ತರಬೇತಿ ಸಂಸ್ಥೆಗಳಲ್ಲಿ ಸೀಟುಗಳ ಮೀಸಲಾತಿ, ಪ್ರದೇಶಕ್ಕೆ ಸೇರಿದ ಅರ್ಹ ವ್ಯಕ್ತಿಗಳಿಗೆ ಪ್ರದೇಶದಲ್ಲಿನ ರಾಜ್ಯ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಸೌಲಭ್ಯಗಳು ಈ ಕಾಯಿದೆಯಿಂದ ಲಭಿಸಿವೆ.

ಸಂವಿಧಾನದಲ್ಲಿ ಆರ್ಟಿಕಲ್ 371 (ಜೆ) ಪರಿಚ್ಛೇದ ಸೇರ್ಪಡೆಯೊಂದಿಗೆ ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರೆತಂತಾಯಿತು. ಹೈದ್ರಾಬಾದ್ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು. ಮುಂದೆ ಮಂಡಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ಪುನರ್ ನಾಮಕರಣ ಮಾಡಲಾಯಿತು.

ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಸಂಬಂಧಿಸಿದಂತೆ ಸಂವಿಧಾನದ ವಿಶೇಷ ಸ್ಥಾನಮಾನಗಳಡಿ ಪ್ರತ್ಯೇಕವಾಗಿ ಸ್ಥಾಪಿಸಲಾಗಿರುವ ಅಭಿವೃದ್ಧಿ ಮಂಡಳಿಯ ಕಾರ್ಯನಿರ್ವಹಣೆಯ ವರದಿಯನ್ನು ಪ್ರತಿವರ್ಷ ರಾಜ್ಯ ವಿಧಾನಸಭೆಯ ಮುಂದೆ ಇಡಲಾಗುವುದು. ಪ್ರದೇಶದ ಅಭಿವೃದ್ಧಿ ವೆಚ್ಚಕ್ಕಾಗಿ ನಿಧಿಯ ಸಮಾನ ಹಂಚಿಕೆ, ಈ ಪ್ರದೇಶಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ವೃತ್ತಿಪರ ತರಬೇತಿ ಸಂಸ್ಥೆಗಳಲ್ಲಿ ಸೀಟುಗಳ ಮೀಸಲಾತಿ, ಪ್ರದೇಶಕ್ಕೆ ಸೇರಿದ ಅರ್ಹ ವ್ಯಕ್ತಿಗಳಿಗೆ ಪ್ರದೇಶದಲ್ಲಿನ ರಾಜ್ಯ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಸೌಲಭ್ಯಗಳು ಈ ಕಾಯಿದೆಯಿಂದ ಲಭಿಸಿವೆ.

ಸಮಾನತೆಯ ಹೊಸ ಹಾದಿಯಲ್ಲಿ ಸಾಗಿದ ಬುದ್ಧ, ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಅಕ್ಷರಶ: ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಅಧಿಕಾರದ ಚುಕ್ಕಾಣಿ ಹಿಡಿದ ದಿನವೇ ಚುನಾವಣೆ ಪೂರ್ವ ನೀಡಿದ ಭರವಸೆಯಂತೆ “ಪಂಚ ಗ್ಯಾರಂಟಿ” ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ 100 ದಿನಗಳ ಅವಧಿಯಲ್ಲಿ ಪ್ರಮುಖ 4 ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಇದು “ನುಡಿದಂತೆ ನಡೆಯುವ ಸರ್ಕಾರ” ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದೇವೆ.

ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಸರಮಾಲೆಯಿಂದ ತತ್ತರಿಸಿದ ನಾಡಿನ ಜನತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ Univarsal Basic Income ಎಂಬ ಹೊಸ ಪರಿಕಲ್ಪನೆಯಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಜನಸಾಮಾನ್ಯರ ಖರೀದಿಯ ಶಕ್ತಿ ಹೆಚ್ಚಾದರೆ ಆರ್ಥಿಕತೆಯು ಉತ್ತಮಗೊಳ್ಳುತ್ತದೆ. ಇದನ್ನು ಈಗಾಗಲೇ ಜಾರಿಗೊಂಡಿರುವ ನಮ್ಮ ಗ್ಯಾರಂಟಿ ಯೋಜನೆಗಳು ಸಾಬೀತುಪಡಿಸುತ್ತಿವೆ.

ವಿಶೇಷವಾಗಿ ಮಹಿಳೆಯರಿಗೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢರಾಗುವ ಅವಕಾಶವನ್ನು ನಾವು ಈ ಯೋಜನೆಗಳ ಮೂಲಕ ಕಲ್ಪಿಸಿದ್ದೇವೆ. ಶಕ್ತಿ, ಗೃಹ ಲಕ್ಷ್ಮಿ ಯೋಜನೆಗಳ ಅನುಕೂಲ ನೇರವಾಗಿ ಮಹಿಳೆಯರನ್ನೇ ತಲುಪುತ್ತಿದ್ದು, ಇದು ಅವರ ಶಿಕ್ಷಣ, ಆದಾಯ ಚಟುವಟಿಕೆಗಳಿಗೆ ಬೆಂಬಲವಾಗಿದೆ ಎಂದರು.

    Bottom Add3
    Bottom Ad 2