ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಮೃತ ಕುಟುಂಬಕ್ಕೆ ಪರಿಹಾರ ನೀಡಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಶಿಕ್ಷಕರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಅವರ ಸಾವಿನ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ತಕ್ಷಣ ಶಿಕ್ಷಕರಿಗೆ ಪರಿಹಾರವನ್ನು ಘೋಷಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಮೈಸೂರಲ್ಲಿ ನಿತ್ಯ 4 -5 ಮಕ್ಕಳಲ್ಲಿ ಕೊರೊನಾ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ