
ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶ ಅಭಿವೃದ್ಧಿಪಡಿಸುವ ಸಲುವಾಗಿ ಕಲ್ಯಾಣ ಕರ್ನಾಟಕದ ಎಸ್.ಸಿ/ ಎಸ್.ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಸರ್ಕಾರಿ ವಸತಿ ಶಾಲೆಗಳು ಮತ್ತು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟ್ರೀಕ್ ಹಿಟ್ ಪಂಪ್‍ಗಳನ್ನು ಪೂರೈಸಲು ರಾಜ್ಯ ಸಚಿಇವ ಸಂಪುಟ ಸಭೆ ಅನುಮೋದನೆ ನೀಡಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2022-23ನೇ ಸಾಲಿನಲ್ಲಿ ಒದಗಿಸಿದ್ದ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಲಭ್ಯವಿರುವ ರೂ. 4266.38 ಲಕ್ಷಗಳ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟ್ರೀಕ್ ಹಿಟ್ ಪಂಪ್‍ಗಳನ್ನು ಪೂರೈಸುವುದಕ್ಕಾಗಿ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ