CrimeKarnataka NewsLatest

*BREAKING: ಮೂವರು ಮಕ್ಕಳನ್ನು ಕೊಲೆಗೈದು ಡಿಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ತಾಯಿ*

ಪ್ರಗತಿವಾಹಿನಿ ಸುದ್ದಿ: ವಿಜಯನಗರದಲ್ಲಿ ಮಗನೇ ತಂದೆ-ತಾಯಿ-ಸಹೋದಿ ಮೂವರನ್ನು ಕೊಲೆಗೈದು ಮನೆಯಲ್ಲಿಯೇ ಶವವನ್ನು ಹೂತಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿರುವ ನಡುವೆಯೇ ಇಲ್ಲೋರ್ವ ತಾಯಿ ತನ್ನ ಮೂವರು ಮಕ್ಕಳುನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ನೊಂದ ತಾಯಿ ರೂಪಾ, ತನ್ನ ಮೂವರು ಮಕ್ಕಳನ್ನು ಕೊಲೆಗೈದು ಬಳಿಕ ತಾನೂ ಡಿಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ, ಪ್ರೀತಮ್ ಹಾಗೂ ಸುಕ್ಷಿತ್ ಕೊಲೆಯಾದ ಮಕ್ಕಳು.

ಡಿಸೆಲ್ ಸೇವಿಸಿ ಅಸ್ವಸ್ಥಗೊಂಡಿದ್ದ ರೂಪಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button