Film & Entertainment

*ಮತ್ತೆ ಉದ್ಧಟತನ ಮೆರೆದ ಕಮಲ್ ಹಾಸನ್: ಕ್ಷಮೆ ಕೇಳಲ್ಲ ಎಂದ ನಟ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ತೀವ್ರ ವಿವಾದ ಸೃಷ್ಟಿಸಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ನಟ ಕಮಲ್ ಹಾಸನ್ ಮತ್ತೆ ಉದ್ಧಟತನ ಮೆರೆದಿದ್ದಾರೆ.

ಕಮಲ್ ಹಾಸನ್ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಿಗರು, ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಅವರ ಚಿತ್ರ ಕರ್ನಾಟಕದಲ್ಲಿ ಬಿಡಿಗಡೆಯಾಗಲು ಬಿಡಲ್ಲ ಎಂದು ಪಟ್ಟು ಹಿಡಿದಿವೆ. ತನ್ನ ವಿರುದ್ಧ ಕರ್ನಾಟಕದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದರೂ ತಪ್ಪು ತಿದ್ದಿಕೊಳ್ಳದ ಕಮಲ್ ಹಾಸನ್ ತಾನು ಹೇಳಿದ್ದು ನನ್ನ ಪ್ರಕಾರ ಸರಿಯಿದೆ ಎಂದು ಮೊಂಡಾಟ ಮೆರೆದಿದ್ದಾರೆ.

ಕೇರಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಕಮಲ್ ಹಾಸನ್, ನಾನು ಹೇಳಿದ್ದು ನನ್ನ ಪ್ರಕಾರ ಸರಿಯಿದೆ. ನಾನು ಕ್ಷಮೆ ಕೇಳಲ್ಲ ಎಂದು ಹೇಳಿದ್ದಾರೆ. ಭಾಷೆ ಬಗ್ಗೆ ಮಾತನಾಡಲು ರಾಜಕರಣಿಗಳಿಗೆ ಅರ್ಹತೆ ಇಲ್ಲ. ಅನೇಕ ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ತಮಿಳುನಾಡು ಒಂದು ವಿಶಾಲ ಹೃದಯವುಳ್ಳ ರಾಜ್ಯ. ಮಲಯಾಳಮ್ ಮೆನನ್. ತೆಲುಗಿನ ರೆಡ್ಡಿ, ಕನ್ನಡದ ಅಯ್ಯಂಗಾರ್ ತಮಿಳುನಾಡಿನಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ. ಭಾಷೆ ಬಗ್ಗೆ ಆಳವಾದ ಚರ್ಚೆಗಳು ನಡೆಯಲಿ. ಇದನ್ನು ಇತಿಹಾಸಕಾರರು, ಪುರಾತತ್ವಶಾಸ್ತ್ರಜ್ಞರು ಮತ್ತು ಭಾಷಾ ತಜ್ಞರಿಗೆ ಬಿಡೋಣ ಎಂದು ಹೇಳಿದ್ದಾರೆ.

ನಾನು ಪ್ರೀತಿಯಿಂದಲೇ ಹೇಳಿದ್ದೇನೆ. ನಾನು ಸಮಸ್ಯೆಗೆ ಸಿಲುಕಿದಾಗ ನನಗೆ ಬೆಂಬಲವಾಗಿ ನಿಂತಿದ್ದು ಕನ್ನಡಿಗರು. ಚೆನ್ನೈನಲ್ಲಿ ಸಮಸ್ಯೆಯಾದಾಗ ಕನ್ನಡಿಗರು ಸಪೋರ್ಟ್ ಮಾಡಿದ್ರು. ನನ್ನ ಸಿನಿಮಾಗಳನ್ನು ಅಭಿಮಾನಿಗಳು ನೋಡ್ತಾರೆ. ನನ್ನ ಪ್ರಕಾರ ನನ್ನ ಹೇಳಿಕೆ ಸರಿಯಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button