Kannada NewsKarnataka NewsLatest

*ಖ್ಯಾತ ಜೋತಿಷಿ ಕಮಲಾಕರ್ ಭಟ್ ಪ್ರಕರಣ: ಇಬ್ಬರು ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಸಿದ್ದಾಪುರದಲ್ಲಿ ವಸಂತ ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವೈಫಲ್ಯ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸರ ತಲೆದಂಡವಾಗಿದೆ. ಪ್ರಕರಣದಲ್ಲಿ ಪೊಲೀಸರ ವೈಫಲ್ಯವಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಈ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣೆಯ ಎಎಸ್ಐ ಗಣಪತಿ ಭಟ್ ಹಾಗೂ ಹೆಡ್ ಕಾನ್ಸ್ ಟೇಬಲ್ ಚಂದ್ರಶೇಖರ್ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಇಬ್ಬರನ್ನೂ ಹಳಿಯಾಳ ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.ಶಿರಸಿ ಡಿವೈಎಸ್ ಪಿ ಗೀತಾ ಪಾಟೀಲ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ.

ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ನಾಯಕ್ ರಿಂದ ವಸಂತ ನಾಯಕ್ ಹತ್ಯೆ ಪ್ರಕರಣ ಇದಾಗಿದೆ. ಅಕ್ರಮ ಸಂಬಂಧದ ಬಗ್ಗೆ ಮಹಿಳೆ ಸುಚಿತ್ರಾ ನಾಯಕ್ ಪತಿ ಮಹೇಶ್ ನಾಯಕ್ ಪೊಲೀಸರಿಗೆ ದೂರು ನೀಡಿದ್ದಕ್ಕೆ, ಮನೆಗೆ ನುಗ್ಗಿದ್ದ ಕಮಲಾಕರ್ ಭಟ್, ಸುಚಿತ್ರಾ ಹಾಗೂ ಸಹಚರರು, ಮಹೇಶ್ ಹಾಗೂ ಆತನ ಸಹೋದರ ವಸಂತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಹಲ್ಲೆಗೊಳಗಾದಿದ್ದ ವಸಂತ್ ನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ಕೇಸ್ ನಲ್ಲಿ ಪೊಲೀಸರ ವೈಫಲ್ಯವಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Related Articles

Back to top button