Latest

ಕಮಲವ್ವನಿಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತಿ ವೃಷ್ಟಿಯಿಂದ ಮನೆ ಕಳೆದುಕೊಂಡ ಕಮಲವ್ವ ಎಂಬ ಮಹಿಳೆ ಸಂಕಷ್ಟಕ್ಕೆ ಮಿಡಿದ ಸಿಎಂ ಬಸವರಾಜ್ ಬೊಮ್ಮಾಯಿ ಕೊಟ್ಟ ಮಾತಿನಂತೆ ಮನೆ ಕಲ್ಪಿಸಿಕೊಟ್ಟಿದ್ದಾರೆ.

ಖಾಸಗಿ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟ ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಿದ್ದರು. ಇಬ್ಬರೂ ಗಂಡುಮಕ್ಕಳು ಸಾವನ್ನಪ್ಪಿದ್ದು, ಮನೆ ಕಟ್ಟಸಿಕೊಡುವಂತೆ ಸಿಎಂ ಬೊಮ್ಮಾಯಿ ಅವರ ಬಳಿ ಕಣ್ಣೀರಿಟ್ಟಿದ್ದರು.

ಕಮಲವ್ವನಿಗೆ ಸಾಂತ್ವನ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಮಲವ್ವ ಸ್ವಂತ ಸೂರಿನಡಿ ಸಂಕ್ರಾಂತಿ ಆಚರಿಸುವಂತೆ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಶಿಗ್ಗಾಂವಿಯ ಮಂಚಿನಕೊಪ್ಪ ಗ್ರಾಮದ ಕಮಲವ್ವ ತಿಮ್ಮನಗೌಡ್ರ ತಮಗೆ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ನಾಲ್ಕೇ ತಿಂಗಳಿನಲ್ಲಿ ಮನೆ ನಿರ್ಮಿಸಿ, ಸಂಕ್ರಾಂತಿಯಂದು ಕಮಲವ್ವನಿಗೆ ಮನೆಯನ್ನು ಹಸ್ತಾಂತರಿಸಲಾಯಿತು.

ಹ್ಯಾಬಿಟ್ಯಾಟ್ ಸೆಂಟರ್ ಮೂಲಕ ನಿರ್ಮಿಸಲಾದ ಸುಸಜ್ಜಿತ ಮನೆಯನ್ನು ಸವಣೂರ ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ಹಸ್ತಾಂತರಿಸಿದರು.

ದಡಾರ, ರೂಬೆಲ್ಲಾ ವ್ಯಾಕ್ಸಿನ್ ವ್ಯತಿರಿಕ್ತ ಪರಿಣಾಮವೇ ಮಕ್ಕಳ ಸಾವಿಗೆ ಕಾರಣ…?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button