Latest

ಕಂಬಳ ಖ್ಯಾತಿಯ ಶ್ರೀನಿವಾಸ್ ಗೌಡ ವಿರುದ್ಧ ದೂರು ದಾಖಲು

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿರುವ ಶ್ರೀನಿವಾಸ್ ಗೌಡ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಶ್ರೀನಿವಾಸ್ ಗೌಡ ವಿರುದ್ಧ ದೂರು ನೀಡಿದ್ದಾರೆ.

ಶ್ರೀನಿವಾಸ್ ಗೌಡ, ಉಸೇನ್ ಬೋಲ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಹಾಗೂ ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಂಬಳ ಓಟಗಾರ ಶ್ರೀನಿವಾಸ್ ಗೌಡ, ಕಂಬಳ ಅಕಾಡೆಮಿ ನಡೆಸುವ ಗುಣಪಾಲ ಕಡಂಬ ಹಾಗೂ ಲೇಸರ್ ಬೀಮ್ ಮೂಲಕ ಕಂಬಳ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ ವಿರುದ್ಧ ಕ್ರಿಮಿನಲ್ ದೂರು ನೀಡಲಾಗಿದೆ. ಇವರ ಬಗ್ಗೆ ಪೊಲೀಸರು ತನಿಖೆ ನಡೆಸಲು ಮುಂದಾಗದಿದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ದೂರು ದಾರರು ತಿಳಿಸಿದ್ದಾರೆ.

Home add -Advt

2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ.ದೂರನ್ನು 9.55ಸೆಕೆಂಡ್ ನಲ್ಲಿ ಶ್ರೀನಿವಾಸ್ ಗೌಡ ಕ್ರಮಿಸಿದ್ದರು. ಈ ಮೂಲಕ 2009ರಲ್ಲಿ ಉಸೇನ್ ಬೋಲ್ಟ್ 100ಮೀ. ಅನ್ನು 9.58 ಸೆಕೆಂಡ್ ನಲ್ಲಿ ಕ್ರಮಿಸಿದ ದಾಖಲೆಯನ್ನು ಶ್ರೀನಿವಾಸ್ ಗೌಡ ಮುರಿದಿದ್ದರು. ರಾಜ್ಯ ಸರ್ಕಾರ ಹಾಗೂ ದೇಶದ ವಿವಿಧ ಸಂಸ್ಥೆಗಳು ಶ್ರೀನಿವಾಸ್ ಗೌಡರನ್ನು ಗೌರವಿಸಿ, ನೆರವು ನೀಡಿತ್ತು.
ಮೈಸೂರು ದಸರಾ ಬ್ರ್ಯಾಂಡ್ ಸೃಜನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Related Articles

Back to top button