Karnataka News

*ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಶ್ರೀ ಸಂತ ಕನಕದಾಸ ಜಯಂತಿ ಪ್ರಯುಕ್ತ ನೀಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ ಗೆ ಬಳ್ಳಾರಿಯ ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

Home add -Advt


ಸೋಮವಾರ ನವೆಂಬರ್ 18ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕನಕದಾಸ ಜಯಂತಿ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳು ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದರು.


ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು , ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

Related Articles

Back to top button