*ಕಾಂಚನ್ ಜುಂಗಾ ಎಕ್ಸ್ ಪ್ರೆಸ್ ರೈಲು ಅಪಘಾತ: ಸಾವಿನ ಸಂಖ್ಯೆ 15ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಕಾಂಚನ್ ಜುಂಗಾ ಎಕ್ಸ್ ಪ್ರೆಸ್ ರೈಲು ಹಾಗೂ ಗೂಡ್ಸ್ ರೈಲು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಪಶ್ಚಿಮ ಬಂಗಾಳದ ದಾರ್ಜಿಲಿಂಗ್ ಜಿಲ್ಲೆಯ ಪನ್ಸಿಡೆವಾ ಪ್ರದೇಶದಲ್ಲಿ ಈ ದುರಂತ ಸಮ್ಭವಿಸಿದೆ. ಸಿಲ್ದಾಹ್ ಗೆ ಹೋಗುವ ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲಿಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿಯಾಗಿದೆ. ಘಟನೆಯಲ್ಲಿ 15 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. … Continue reading *ಕಾಂಚನ್ ಜುಂಗಾ ಎಕ್ಸ್ ಪ್ರೆಸ್ ರೈಲು ಅಪಘಾತ: ಸಾವಿನ ಸಂಖ್ಯೆ 15ಕ್ಕೆ ಏರಿಕೆ*