Belagavi NewsBelgaum News

*3 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಳೇನಹಟ್ಟಿಯ ಮುಖ್ಯ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಶುಕ್ರವಾರ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

Home add -Advt

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಕಾಮಗಾರಿ ಮಂಜೂರಾಗಿದ್ದು, ನಿಗದಿತ ಸಮಯದಲ್ಲಿ, ಸ್ಥಳೀಯರ ಸಲಹೆ ಪಡೆದು ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದ್ದಾರೆ.

ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು, ಮಂಗೇಶ ನಾಯ್ಕ, ರಾಜು ನಾಯ್ಕ್, ಬಸು ಅಣ್ಣ, ಪಿಡಿಓ‌ ಶೋಭಾ, ಅಡಿವೆಪ್ಪ ಗೌರನ್ನವರ, ಅನೇಕ ಮುಖಂಡರು ಉಪಸ್ಥಿತರಿದ್ದರು.

Related Articles

Back to top button