
ಬೆಂಗಳೂರು: ಸುಪ್ರೀಂಕೋರ್ಟ್ ಬೆನ್ನಲ್ಲೇ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜಿಯವರಿಗೆ ಬೆಂಗಳೂರು ಕೋರ್ಟ್ ಮತ್ತೊಂದು ಶಾಕ್ ನೀಡಿದೆ.
ಲಿಂಗಾಯಿತ ಮಠಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಬೆಂಗಳೂರಿನ 31ನೇ ಸಿಸಿಹೆಚ್ ಕೋರ್ಟ್ ಅವಹೇಳನಕಾರಿ ಮಾತುಗಳನ್ನಾಡದಂತೆ ನಿಷೇಧ ವಿಧಿಸಿದೆ.
ಲಿಂಗಾಯಿತ ಮಠಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಸ್ವಾಮೀಜಿ ವಿರುದ್ಧ ಲಿಂಗಾಯಿತ ಮಠಗಳ ಒಕ್ಕೂಟ 1 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಮಾನನಷ್ಟ ಮೊಕದ್ದಮೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅಂತಹ ಹೇಳಿಕೆ ನೀಡದಂತೆ ಸ್ವಾಮೀಜಿಗೆ ನಿರ್ಬಂಧ ವಿಧಿಸಿದ್ದು, ನೋಟಿಸ್ ಜಾರಿ ಮಾಡಿದೆ.
 
					 
				 
					 
					 
					 
					
 
					 
					 
					


