Latest

ಬಾಲಿವುಡ್ ನಟಿಯ ವಿರುದ್ಧ ತುಮಕೂರಿನಲ್ಲಿ ದಾಖಲಾಯ್ತು ಎಫ್ ಐಆರ್

ಪ್ರಗತಿವಾಹಿನಿ ಸುದ್ದಿ; ತುಮಕೂರು: ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಕಂಗನಾ ರಣಾವತ್ ರೈತರನ್ನು ಭಯೋತ್ಪಾದಕರು ಎಂದು ಕರೆದಿದ್ದರು. ಈ ಕುರುತು ಟ್ವಿಟರ್ ನಲ್ಲಿ ಕಂಗನಾ ಪೋಸ್ಟ್ ಮಾಡಿದ್ದರು ಎಂದು ಆರೋಪಿಸಿ ವಕೀಲ ರಮೇಶ್ ನಾಯ್ಕ್ ಜೆ ಎಂಎಫ್ ಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

Home add -Advt

ಕೋರ್ಟ್ ನಿರ್ದೇಶನದ ಮೇರೆಗೆ ಇದೀಗ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕಂಗನಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದ ಸಂದರ್ಭದಲ್ಲಿ ನಟಿ ಕಂಗನಾ ರಣಾವತ್ ರೈತರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದರು.

Related Articles

Back to top button