Latest

ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿದ್ಯಾರ್ಥಿ ನಾಯಕ ಎಂದೇ ಗುರುತಿಸಿಕೊಂಡಿರುವ ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ಶಾಸಕ ಜಿಗ್ನೇಶ್ ಮೇವಾನಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಬ್ಬರು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ಜಿಗ್ನೇಶ್ ಮೇವಾನಿ, ನಾನು ಸ್ವತಂತ್ರ ಅಭ್ಯರ್ಥಿಯಾಗಿ ಗುಜರಾತ್ ವಡ್ಗಮ್ ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾದವನು. ಕಾಂಗ್ರೆಸ್ ಸೇರ್ಪಡೆ ಬಳಿಕ ಎಂಎಲ್ ಎ ಯಾಗಿ ಮುಂದುವರೆಯಲು ಸಾಧ್ಯವಾಗದಿರಬಹುದು. ನಾನು ಸೈದ್ಧಾಂತಿಕವಾಗಿ ಕಾಂಗ್ರೆಸ್ ನ ಭಾಗ. ಮುಂದಿನ ಗುಜರಾತ್ ಚುನಾವಣೆಯನ್ನು ಕಾಂಗ್ರೆಸ್ ಚಿಹ್ನೆಯಿಂದಲೇ ಎದುರಿಸುತ್ತೇನೆ ಎಂದು ಹೇಳಿದ್ದಾರೆ.
ಪಂಜಾಬ್ ಕಾಂಗ್ರೆಸ್ ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button