Kannada NewsKarnataka NewsLatest

*ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

Home add -Advt

ಬೆಂಗಳೂರಿನ ಖಾಸಗಿ ಹೋಟೆಲ್ ಗೆ ಬಾಂಬ್ ಇಡಲಾಗಿದೆ ಎಂದು ಪೋಸ್ಟ್ ಮೂಲಕ ಬಾಂಬ್ ಬೆದರಿಕೆ ಪತ್ರ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಜಾಲಹಳ್ಳಿ ಪೊಲೀಸರು ಹೋಟೆಲ್ ಗೆ ದೌಡಾಯಿಸಿದ್ದು, ಜನರನ್ನು, ಸಿಬ್ಬಂದಿಗಳನ್ನು ಹೋಟೆಲ್ ನಿಂದ ಹೊರ ಕಳುಹಿಸಿ ತಪಾಸಣೆ ನಡೆಸಿದ್ದಾರೆ.

ಹೆಚ್.ಎಂ.ಟಿ ಮೈದಾನ ಬಳಿ ಇರುವ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಠಾಣೆ ಪೊಲೀಸರಿಗೆ ಅನಾಮಧೇಯ ಪತ್ರ ಪೋಸ್ಟ್ ಮಾಡಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button