ಪ್ರಗತಿವಾಹಿನಿ ಸುದ್ದಿ: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಗಡುವನ್ನು ಮತ್ತೆ ಎರಡು ವಾರ ವಿಸ್ತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ