ಪ್ರಗತಿವಾಹಿನಿ ಸುದ್ದಿ: ಕನ್ನಡ ಕಿರುತೆಯ ಜನಪ್ರಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದ್ ನ ನಿವಾಸದಲ್ಲಿ ಆತ್ಮಹತ್ಯೆಗೆ ಶರನಾಗಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡ ಧಾರಾವಾಹಿಗಳು ಹಾಗೂ ಸಿನಿಮಾಗಳಲ್ಲಿ ಖ್ಯಾತಿ ಪಡೆದಿದ್ದ ನಟಿ ಶೋಭಿತಾ, ಮದುವೆ ಬಳಿಕ ಹೈದರಾಬಾದ್ ನಲ್ಲಿ ವಾಸವಾಗಿದ್ದರು. ಇದೀಗ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ಮಧ್ಯರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಹೈದರಾಬಾದ್ ಗೆ ದೌಡಾಯಿಸಿದ್ದಾರೆ. ಶೋಭಿತಾ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿವಾಹದ ಬಳಿಕ ಸಿರೀಯಲ್, ಸಿನಿಮಾಗಳಿಂದ ಅಂತರ ಕಾಯ್ದುಕೊಂಡಿದ್ದರು.
‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ವಿಲನ್ ಪಾತ್ರದಲ್ಲಿ ಪಿಂಕಿ ಹೆಸರಿನಿಂದ ಖ್ಯಾತಿ ಪಡೆದಿದ್ದ ಶೋಭಿತಾ, ಹಿಟ್ಲರ್ ಕಲ್ಯಾಣ, ನಿನ್ನಿಂದಲೇ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಅಷ್ಟೇ ಅಲ್ಲ ‘ಶತಭಿಷ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದರು. ಎರಡೊಂದ್ಲಾ ಮೂರು, ಎಟಿಎಂ, ಫಸ್ಟ್ ಡೇ, ಫಸ್ಟ್ ಶೋ, ವಂದನಾ, ಅಟೆಂಪ್ಟ್ ಟು ಮರ್ಡರ್, ಜಾಕ್ ಪಾಟ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ