ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಲು ಹೊಸ ಕಾನೂನು ಜಾರಿಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹಿಂದಿ ದಿವಸ್ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಜೆಡಿಎಸ್ ಸದಸ್ಯರು, ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಲು ಮುಂದಾದರು. ಜೆಡಿಎಸ್ ಸದಸ್ಯ ಅನ್ನದಾನಿ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರಲಾಗುತ್ತಿದೆ, ಯಾವುದೇ ಭಾಷೇ ಬಲವಂತವಾಗಿ ಹೇರುವಂತಿಲ್ಲ ಎಂದು ಸದನದಲ್ಲಿ ರೋಷಾವೇಶ ವ್ಯಕ್ತಪಡಿಸಿದರು.
ಇದೇ ವೇಳೆ ಕನ್ನಡ ಭಾಷೆ, ನಾಡು ನುಡಿ ರಕ್ಷಣೆಗಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.
ಈ ವೇಳೆ ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ.ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ರಾಜಿಯಾಗುವ ಪ್ರಶ್ನೆ ಇಲ್ಲ. ಈ ವಿಚಾರವಾಗಿ ರಾಜಕೀಯ ಮೀರಿ ನಡೆದುಕೊಂಡಿದ್ದೇವೆ. ಕನ್ನಡ ಕಡ್ಡಾಯಗೊಳಿಸಲು ಇದೇ ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು. ಇಂಜಿನಿಯರಿಂಗ್ ಪರೀಕ್ಷೆ ಕೂಡ ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ನಟ ರಮೇಶ ಅರವಿಂದ್ ಗೆ ರಾಣಿ ಚನ್ನಮ್ಮ ವಿವಿ ಗೌರವ ಡಾಕ್ಟರೇಟ್
https://pragati.taskdun.com/latest/actor-ramesh-aravindhonoured-by-doctoraterani-chennamma-univercity/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ