Kannada NewsKarnataka NewsNationalPolitics

*ಸರ್ಕಾರಿ ಕಚೇರಿಗಳಲ್ಲೂ ಕನ್ನಡ ನಾಮಫಲಕ ಕಡ್ಡಾಯ*

ಪ್ರಗತಿವಾಹಿನಿ ಸುದ್ದಿ: ಇನ್ನು ಮುಂದೆ ಸರಕಾರದ ಎಲ್ಲ ಕಚೇರಿಗಳಲ್ಲಿ ನಾಮಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶಿಸಿದ್ದಾರೆ.

ಅನಿವಾರ್ಯದ ಸ್ಥಿತಿ ಬಂದರೆ ಕನ್ನಡ ಭಾಷೆಯು ಶೇ 60 ರಷ್ಟು ಹಾಗೂ ಇಂಗ್ಲೀಷ್ ಭಾಷೆ ಶೇ 40 ರಷ್ಟು ಹೊಂದಿರತಕ್ಕದ್ದು ಎಂದು ಆದೇಶದಲ್ಲಿ ಹೊರಡಿಸಿದ್ದಾರೆ.

ಸರ್ಕಾರದ ನಿಗಮ, ಮಂಡಳಿ, ಆಯುಕ್ತಾಲಯ, ನಿರ್ದೇಶನಾಲಯ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು ಸೇರಿದಂತೆ ಉಳಿದಂತ ಎಲ್ಲವೂ ಕನ್ನಡ ಭಾಷೆಯಲ್ಲೇ ಬರೆದಿರಬೇಕು ಎಂದು ಅವರು ಹೇಳಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರ ಅನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button