Latest

ಅದರ ಪರಿಣಾಮವನ್ನು ನೀವೇ ಮುಂದೆ ನೋಡುತ್ತೀರಿ; ಕಿಡಿಕಾರಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಗೆ ಅದೆಷ್ಟು ಅಭದ್ರತೆ ಕಾಡುತಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿಯಿಂದ ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷ ಬೇಡ ಅಂತಲೇ ಅವರು ಈ ಕಡೆಗೆ ಬಂದಿದ್ದಾರೆ. ಅಂದ ಮೇಲೆ ಮತ್ತೆ ಯಾರೂ ಕಾಂಗ್ರೆಸ್ ಗೆ ಹೋಗುವ ಪ್ರಶ್ನೆಯೇ ಬರುವುದಿಲ್ಲ ಎಂದರು.

ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಬರುತ್ತಾರೆ ಎಂಬ ಹೇಳಿಕೆಯ ಪರಿಣಾಮವನ್ನು ನೀವೇ ಮುಂದೆ ನೋಡುತ್ತಿರಿ. ಕೆಲವೇ ದಿನಗಳಲ್ಲಿ ಬಿಜೆಪಿ ಬಲವರ್ಧನೆ ಬಗ್ಗೆ ತಿಳಿಯುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರೇ ಬಿಜೆಪಿಗೆ ಸೇರ್ಪಡೆಯಾಗುವ ಬಗ್ಗೆ ಸುಳಿವು ನೀಡಿದ್ದಾರೆ.

ಹೌದು, ಅವರು ನನ್ನ ಸಂಪರ್ಕದಲ್ಲಿದ್ದಾರೆ; ಸಿದ್ದರಾಮಯ್ಯ

Home add -Advt

Related Articles

Back to top button