GIT add 2024-1
Laxmi Tai add
Beereshwara 33

ಕೊರೊನಾ ಸೋಂಕು: ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ದಕ್ಷಿಣ ಕನ್ನಡ ಜಿಲ್ಲೆಯ ಮನೆಯಲ್ಲಿ ಘಟನೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರು ತನಗೆ ಕೊರೊನಾ ಸೋಂಕು ತಗುಲಿದೆ ಎಂಬ ಆತಂಕಕ್ಕೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

Emergency Service

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಬ್ಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಅಬ್ಬೆಟ್ಟು ನಿವಾಸಿ ಸದಾಶಿವ ಶೆಟ್ಟಿ(56) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಸದಾಶಿವ ಅವರು ತನಗೆ ಕೊರೊನಾ ತಗಲಿದೆ ಎಂದು ಶಂಕಿಸಿ ಭಯಗೊಂಡಿದ್ದರು. ತನ್ನಿಂದ ಮನೆಯವರಿಗೂ ಈ ಸೋಂಕು ಹರಡಬಹುದೆಂಬ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಇದೇ ಕಾರಣಕ್ಕೆ ಸದಾಶಿವ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮನೆಯವರ ಬಳಿ ಸದಾಶಿವ ಅವರು ಹೇಳಿಕೊಂಡಿದ್ದರು ಎಂದು ಪತ್ನಿ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bottom Add3
Bottom Ad 2