Yoga add Final 1
KLE1099 Add

ಮಗನ ಮೇಲೆ ಚಿರತೆ ದಾಳಿ; ಸುದ್ದಿ ಕೇಳಿ ಹೃದಯಾಘಾತದಿಂದ ಮೃತಪಟ್ಟ ತಾಯಿ

ಬೆಳಗಾವಿಯ ಕೆ.ಹೆಚ್.ಖನಗಾವಿಯಲ್ಲಿ ದುರಂತ

GIT Add 3
Beereshwara add 12

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಸುದ್ದಿಕೇಳಿದ ತಾಯಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕೆ.ಹೆಚ್.ಖನಗಾವಿ ಗ್ರಾಮದಲ್ಲಿ ನಡೆದಿದೆ.

ಶಾಂತಾ ಮಿರಜಕರ್ (65) ಮೃತ ದುರ್ದೈವಿ. ಜಾಧವ್ ನಗರದಲ್ಲಿ ಸಿದ್ದರಾಯಿ ಮಿರಜಕರ್ ಎಂಬಾತನ ಮೇಲೆ ಚಿರತೆ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸಿದ್ದರಾಯಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗುತ್ತಿದ್ದರು.

ಇದೇ ವೇಳೆ ಮಗನ ಮೇಲೆ ಚಿರತೆ ದಾಳಿ ಮಾಡಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಆಘಾತಗೊಂಡ ತಾಯಿ ಶಾಂತಾ ಮಿರಜಕರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ನಗರದಲ್ಲಿ ಚಿರತೆ ದಾಳಿ; ಓರ್ವನಿಗೆ ಗಾಯ; ಬೆಚ್ಚಿ ಬಿದ್ದ ಜನ

Home add- Bottom