World Environment Day

ಶನಿವಾರ ರಾಜ್ಯಾದ್ಯಂತ ಶಾಲೆ, ಕಾಲೇಜಿಗೆ ರಜೆ -ಸಚಿವ ಸುರೇಶ ಕುಮಾರ

ಅಯೋಧ್ಯಾ ತೀರ್ಪು ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಅಯೋಧ್ಯಾ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ.

ರಾಜ್ಯ ಶಿಕ್ಷಣ ಸಚಿವ ಸುರೇಶ ಕುಮಾರ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಶನಿವಾರ ಬೆಳಗ್ಗೆ 10.30ಕ್ಕೆ ಅಯೋಧ್ಯಾ ಪ್ರಕರಣದ ತೀರ್ಪು ಹೊರಬೀಳಲಿದೆ. ಇಡೀ ದೇಶವೇ ಈ ತೀರ್ಪಿನ್ನು ಕಾಯುತ್ತಿದೆ.

ಅಯೋಧ್ಯಾ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಎಲಲಾ ಸರಕಾರಿ ಕಾರ್ಯಕ್ರಮಗಳನ್ನು ರದ್ದುಮಾಡಲಾಗಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳೂ ಸಹ ತಮ್ಮ ಸಮಾವೇಶ ಮತ್ತಿತರ ಕಾರ್ಯಕ್ರಮಗಳನ್ನು ರದ್ದುಮಾಡಿವೆ.

ನಾಳೆಯೇ ಅಯೋಧ್ಯಾ ತೀರ್ಪು -Big Breaking