

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉಪರಾಷ್ಟ್ರಪತಿ ಚುನಾವಣಾ ಮತ ಎಣಿಕೆ ಮುಕ್ತಾಯಗೊಂಡಿದ್ದು, ಭಾರತದ ನೂತನ ಉಪರಾಷ್ಟ್ರಪತಿಯಾಗಿ ಜಗಧೀಪ್ ಧನಕರ್ ಆಯ್ಕೆಯಾಗಿದ್ದಾರೆ.
ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ರಾಜಸ್ಥಾನ ಮೂಲದ 71 ವರ್ಷದ ಜಗದೀಪ್ ಧನಕರ್ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು, ಈ ಹಿಂದೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
ಉಪರಾಷ್ಟ್ರಪತಿ ಚುನಾವಣೆ ಹಿನೆಲೆಯಲ್ಲಿ ಯುಪಿಎ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಕಣಕ್ಕಿಳಿದಿದ್ದರು, ಆಡಳಿತಾರೂಢ ಎನ್ ಡಿಎ ಅಭ್ಯರ್ಥಿಯಾಗಿದ್ದ ಜಗದೀಪ್ ದನಕರ್ ಅವರು ಒಟ್ಟು 528 ಮತಗಳನ್ನು ಪಡೆದು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಆಗಸ್ಟ್ 11ರಂದು ನೂತನ ಉಪರಾಷ್ಟ್ರಪತಿಯಾಗಿ ಧನಕರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಎರಡು ಹೆಚ್ಚುವರಿ SDRF ತಂಡ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ಗ್ರುಪ್ ಸೇರಲು NEWS ಎಂದು ಟೈಪ್ ಮಾಡಿ 8197712235 ನಂಬರ್ ಗೆ ವಾಟ್ಸಪ್ ಮಾಡಿ.
ದಯವಿಟ್ಟು ನಮ್ಮ YouTube ಚಾನೆಲ್ ಗೆ ಸಬ್ ಸ್ಕ್ರೈಬ್ ಮಾಡಿ