Karnataka News

*ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಬೆಳಗಾವಿಗೆ ಏಕೈಕ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 69 ಸಾಧಕರಿಗೆ 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಘ-ಸಂಸ್ಥೆ ಹಾಗೂ ವೈಯಕ್ತಿಕವಾಗಿ ಒಟ್ಟು 69 ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

50 ಪುರುಷ ಹಾಗೂ 59 ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು. ಬೆಳಗಾವಿ ಜಿಲ್ಲೆಗೆ ಸಾಹಿತ್ಯ ಕ್ಷೇತ್ರದಲ್ಲಿ ಬಾಳಾಸಾಹೇಬ ಲೋಕಾಪುರ ಅವರಿಗೆ ಪ್ರಶಸ್ತಿ ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್‌ ಎಸ್‌. ತಂಗಡಗಿ ಅವರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. ಪ್ರತಿ ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಎಂದರು.

Home add -Advt

ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.

ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ.

ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ –

https://mail.google.com/mail/u/0?ui=2&ik=8ea932610f&attid=0.1&permmsgid=msg-a:r7586751693964113458&th=192dd46e0a90b077&view=att&disp=inline&realattid=192dd464028f3cef4151


Related Articles

Back to top button