
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡನಗಟ್ಟಿ ನೇತೃತ್ವದಲ್ಲಿ ಚೆನ್ನಮ್ಮ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಚೆನ್ನಮ್ಮ ವೃತಕ್ಕೆ ಆಗಮಿಸಿದ್ದ ಕರವೇ ಕಾರ್ಯಕರ್ತರು ಕೇಕ್ ಕತ್ತರಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ, ಕನ್ನಡ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಇದೇ ವೇಳೆ ದಿ.ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಪುಟಾಣಿ ಮಕ್ಕಳು ಕನ್ನದ ಹಾಡುಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯುತ್ತಿದೆ.
ಬೆಳಗಾವಿಗೆ ಬಂದು ಚಹಾ ಕುಡಿದು ಹೋದ ಸಚಿನ್ ತಂಡೂಲ್ಕರ್
https://pragati.taskdun.com/latest/sachin-tendulkarbelagavitea-stalvisit/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ