ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ರಾಜ್ಯಾದ್ಯಂತ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ಭಾಷೆ ಸದೃಢವಾಗಿದ್ದರೆ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಎಲ್ಲರೂ ಕನ್ನಡದಲ್ಲಿಯೇ ಪ್ರತಿದಿನ ಮಾತನಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ಬಳಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಬೇಕಾಗಿರುವುದು ನಾಡಿನ ಜನತೆಯ ನಮ್ಮೆಲ್ಲರ ಕರ್ತವ್ಯ. ಕನ್ನಡವನ್ನು ಹೆಮ್ಮರವಾಗಿ ಬೆಳೆಸುವುದು ನಮ್ಮ ಉದ್ದೇಶ. ಕನ್ನಡ ಭಾಷೆ ಸದೃಢವಾಗಿದ್ದರೆ ರಾಜ್ಯ ಶಕ್ತಿಶಾಲಿಯಾಗಿರುತ್ತದೆ ಎಂದರು.
ಕನ್ನಡ ಭಾಷೆಗೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ. ಕನ್ನಡವನ್ನು ರಾಜ್ಯದ ಗಡಿಯೊಳಗೆ ಸೀಮಿತವಾಗಿ ನೋಡುತ್ತಿಲ್ಲ. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಮಾಡಬೇಕು. ಇನ್ಮುಂದೆ ಮುಂಬೈ ಕರ್ನಾಟಕ ಎಂದು ಹೇಳುವಂತಿಲ್ಲ. ಗಡಿ ವಿವಾದಗಳಿದ್ದಾಗಲೂ ಕಿತ್ತೂರು ಕರ್ನಾಟಕ ಎಂದು ಕರೆಯಬೇಕು. ರಾಜ್ಯದ ಯಾವುದೇ ಪ್ರದೇಶ ಹಿಂದುಳಿಯಲು ಬಿಡಲ್ಲ. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಯೋಜನೆ ರೂಪಿಸುತ್ತೇವೆ. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕನ್ನಡ ಬಾರದವರಿಗೂ ಭಾಷೆ ಕಲಿಸಬೇಕಿದೆ ಎಂದು ಹೇಳಿದರು.
ಎಲ್ ಪಿ ಜಿ ಸಿಲಿಂಡರ್ ದರ 265 ರೂಪಾಯಿ ಹೆಚ್ಚಳ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ