Cancer Hospital 2
Bottom Add. 3

*ಕನ್ನಡ ರಾಜ್ಯೋತ್ಸವ: ನಾಡಿನ ಜನತೆಗೆ ರಾಜ್ಯೋತ್ಸವ ಶುಭಕೋರಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಶುಭಾಷಯಗಳು. ವಿವಿಧ ಪ್ರಾತ್ಯಂಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರದಿನ. ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಶುಭಾಷಯಗಳು ಎಂದು ಸಿಎಂ ಸಿದ್ದರಾಮಯ್ಯ ಶುಭಕೋರಿದ್ದಾರೆ.

ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973ರ ನವೆಂಬರ್ 1ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ.

ಕರ್ನಟಕದ ಸುವರ್ಣ ಮಹೋತ್ಸವದ ಇಂದಿನ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ. ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವ ಆಗಲಿ ಎಂದು ಶುಭ ಹಾರೈಸಿದ್ದಾರೆ.

Bottom Add3
Bottom Ad 2

You cannot copy content of this page