Latest

ಕನ್ನಡಾಂಬೆ ಭುವನೇಶ್ವರಿ ದೇವಿಯ ಅಧಿಕೃತ ಚಿತ್ರ ಬಿಡುಗಡೆಗೆ ಸರ್ಕಾರ ಸಮ್ಮತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಡ ಅಧಿದೇವತೆ  ಕನ್ನಡಾಂಬೆ ಭುವನೇಶ್ವರಿ ದೇವಿಯ ಅಧಿಕೃತ ಚಿತ್ರವನ್ನು ಬಿಡುಗಡೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒಪ್ಪಿದೆ.

ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಕನ್ನಡಾಂಬೆ ಚಿತ್ರದ ಬದಲಿಗೆ ಸರಸ್ವತಿ, ದುರ್ಗಾದೇವಿ ಫೋಟೋಗಳನ್ನು ಇಟ್ಟು ಪೂಜಿಸಲಾಗುತ್ತಿತ್ತು. ಅಲ್ಲದೇ ಕನ್ನಡಾಂಬೆ ಭುವನೇಶ್ವರಿ ಚಿತ್ರವನ್ನು ಬೇರೆ ಬೇರೆ ರೀತಿಯಲ್ಲಿ ಚಿತ್ರಿಸಲಾಗುತ್ತಿತ್ತು. ಕನ್ನಡಾಂಬೆಗೆ ನಿರ್ದಿಷ್ಟ ಚಿತ್ರ ಇಲ್ಲದಿರುವುದನ್ನು ಗಮನಿಸಿ ಇದೀಗ ಇಲಾಖೆ ಕರ್ನಾಟಕ ಮಾತೆ ಪ್ರಾಮಾಣಿತ ಅಧಿಕೃತ ಚಿತ್ರ ಬಿಡುಗಡೆಗೆ ಮುಂದಾಗಿದೆ.

ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದಲ್ಲಿ ಸಮಿತಿ ಈ ಬಗ್ಗೆ ಶಿಫಾರಸು ಮಾಡಿತ್ತು. ಕಲಾವಿದ ಸೋಮಶೇಖರ್ ಕೆ. ರಚಿಸಿರಿವ ಚಿತ್ರವನ್ನು ಅಧಿಕೃತವಾಗಿ ಜಾರಿಗೆ ತರುವಂತೆ ಒತ್ತಾಯಿಸಲಾಗಿತ್ತು. ಅದರಂತೆ ಕರ್ನಾಟಕದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಚಿತ್ರವನ್ನು ಐವರು ಕಲಾವಿದರ ಸಮಿತಿಯಿಂದ ಶಿಫಾರಸು ಒಪ್ಪಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಶೀಘ್ರದಲ್ಲಿ ಸಿಎಂ ಬಸವರಾಜ್ ಬೊಮಾಯಿ ಆದೇಶ ಹೊರಡಿಸಲಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಕಚೇರಿ, ಶಾಲಾಕಾಲೇಜು ಗೋಡೆಗಳ ಮೇಲೆ ಕನ್ನಡಾಂಬೆ ಭುವನೇಶ್ವರಿಯ ಈ ಭಾವಚಿತ್ರವನ್ನೇ ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

 

Home add -Advt

Related Articles

Back to top button