Kannada NewsKarnataka NewsLatest

*ಕನ್ನಡದಲ್ಲಿ ನಾಮಫಲಕ; ಡೆಡ್ ಲೈನ್ ನೀಡಿದ ಆಯುಕ್ತರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಲ್ಲಾ ನಾಮಫಲಕಗಳು ಇನ್ಮುಂದೆ ಕನ್ನಡದಲ್ಲಿ ಇರಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಮಾಲ್ ಗಳು, ಅಂಗಡಿಗಳು, ಹೋಟೆಲ್ ಗಳು ಸೇರಿದಂತೆ ಎಲ್ಲಾ ನಾಮಫಲಕಗಳು ಕನ್ನಡದಲ್ಲಿ ಇರಬೇಕು. ಫೆ.28ರೊಳಗೆ ನಾಮಫಲಕಗಳನ್ನು ಕನ್ನಡದಲ್ಲಿ ಬದಲಿಸುವಂತೆ ಸೂಚಿಸಲಾಗಿದೆ. ಇಲ್ಲದಾವಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಡಿ.27ರಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕನ್ನಡ ನಾಮಫಲಕ ಅಭಿಯಾನ ನಡೆಸಲಿದ್ದಾರೆ. ಕನ್ನಡ ನಾಮಫಲಕ ಹಾಕುವಂತೆ ಸರ್ಕಾರ ಕೂಡ ಆದೇಶ ಹೊರಡಿಸಿರುವುದರಿಂದ ಈ ಬಗ್ಗೆ ನಾವು ಗಮನವಹಿಸುತ್ತಿದ್ದೇವೆ. ಯಾರು ನಿಯಮ ಪಾಲಿಸುವುದಿಲ್ಲ ಅವರ ಬಗ್ಗೆ ವಲಯ ಆಯುಕ್ತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button