ಹಿಂದಿ ದಿವಸ್ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಹಿಂದಿ ದಿವಸ್ ಆಚರಿಸಬೇಕೆನ್ನುವ ಕೇಂದ್ರ ಸರಕಾರದ ನಿರ್ಧಾರಕ್ಕೆ ಕರ್ನಾಟಕದಲ್ಲಿ ವಿರೋಧ ಹೆಚ್ಚುತ್ತಿದ್ದು, ಟ್ವೀಟ್ ಅಭಿಯಾನ ಆರಂಭವಾಗಿದೆ.
ಕರ್ನಾಟಕದಲ್ಲಿ ಕನ್ನಡವೇ ಸರ್ವಸ್ವ. ಇಲ್ಲಿ ಹಿಂದಿ ದೇರಲು ಸಾಧ್ಯವಿಲ್ಲ. ಭಾರದ ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ. ಇಲ್ಲಿ ಅವರವರ ಭಾಷೆಗೆ ಗೌರವ ನೀಡಬೇಕು. ಹಿಂದಿಯನ್ನು ಹೇರುವುದು ಸರಿಯಲ್ಲ ಎಂದು ವಿವಿಧ ಕನ್ನಡ ಸಂಘಟನೆಗಳು, ರಾಜಕೀಯ ನಾಯಕರು ಆಗ್ರಹಿಸಿದ್ದಾರೆ.
ಕರ್ನಾಟಕದ ರಕ್ಷಣಾ ವೇದಿಕೆಯ ಬಣಗಳ ನಾಯಕರಾದ ನಾರಾಯಣ ಗೌಡ ಮತ್ತು ಪ್ರವೀಣ ಶೆಟ್ಟಿ ಇಬ್ಬರೂ ಕೇಂದ್ರದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಚಳವಳಿ ನಾಯಕ ವಾಟಾಳ ನಾಗರಾಜ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿಂದಿನ ಭಾಷೆಯನ್ನು ಏಕಭಾಷೆಯನ್ನಾಗಿ ಬಳಸುವ ಮೂಲಕ ರಾಷ್ಟ್ರದಲ್ಲಿ ಏಕತೆಯನ್ನು ಸಾರಬೇಕು ಎನ್ನುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟ್ವೀಟ್ ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದಿ ದಿವಸ್ ಆಚರಣೆಗೆ ಹಾಗೂ ಹಿಂದಿ ಹೇರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊದಲು ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಕನ್ನಡಿಗರಿಗೆ ಅವಕಾಶ ಕೊಡಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ನಡಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಹಿಂದಿ ದಿವಸ್ ಆಚರಣೆಗೆ ಕಿಡಿಕಾರಿದ್ದಾರೆ. ಕೇಂದ್ರ ಸರಕಾರ ಕನ್ನಡಿಗರ ಮೇಲೆ ಹಿಂದಿ ಹೇರಲು ಬಂದರೆ ಸುಮ್ಮನಿರುವುದಿಲ್ಲ ಎಂದಿದ್ದಾರೆ.
ಕನ್ನಡಿಗರು ಹಿಂದಿ ಹೇರಿಕೆಯ ವಿರುದ್ಧ ಟ್ವೀಟರ್ ಅಭಿಯಾನ ಶುರು ಮಾಡಿದ್ದಾರೆ. #StopHindiImposition #MakeMyLanguageOfficial ಎಂದು ಟ್ವೀಟ್ ಮಾಡಲಾಗುತ್ತಿದೆ.
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲರಿಗೂ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ