ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇರಳ ಬೆನ್ನಲ್ಲೇ ಇದೀಗ ಉತ್ತರ ಪ್ರದೇಶದ ಕಾನ್ಪುರದಲ್ಲಿ ವ್ಯಕ್ತಿಯೊಬ್ಬರಲ್ಲಿ ಝೀಕಾ ವೈರಸ್ ಪತ್ತೆಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಕಾನ್ಪುರದ 57 ವರ್ಷದ ವ್ಯಕ್ತಿಯಲ್ಲಿ ಝೀಕಾ ಸೋಂಕು ಪತ್ತೆಯಾಗಿದೆ. ಗ್ರಾಮಕ್ಕೆ ಭೇಟಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ ತಜ್ಞರ ತಂಡ ಪರಿಶೀಲನೆ ನಡೆಸಿದ್ದು, ಸೋಂಕಿತನ ಕುಟುಂಬದ 22 ಜನರ ಸ್ಯಾಂಪಲ್ ನ್ನು ಸಂಗ್ರಹಿಸಿದೆ.
ವ್ಯಕ್ತಿಯಲ್ಲಿ ಅಕ್ಟೋಬರ್ 22 ರಂದು ಝೀಕಾ ವೈರಸ್ ಪಾಸಿಟಿವ್ ಬಂದಿತ್ತು. ಸೋಂಕಿತನನ್ನು ಏರ್ ಫೋರ್ಟ್ ಸ್ಟೇಷನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರೋಗಿಯ ಆರೋಗ್ಯ ಸ್ಥಿರವಾಗಿದೆ ಎಂದು ಕಾನ್ಪುರ ವಿಭಾಗಿಯ ಆಯುಕ್ತ ರಾಜಶೇಖರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಸಿಹಿ ; ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ (ಇಲ್ಲಿದೆ ಸಮಗ್ರ ವಿವರ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ