ಪ್ರಗತಿವಾಹಿನಿ ಸುದ್ದಿ; ಕಾನ್ಪುರ: ಗುಡಿಸಲಿನಲ್ಲಿ ಕಾಣಿಸಿಕೊಂಡ ಬೆಂಕಿ ದುರಂತದಲ್ಲಿ ಮೂವರು ಮಕ್ಕಳು ಸೇರಿ ಐವರು ಸಜೀವ ದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ದೇಹತ್ ನಲ್ಲಿ ನಡೆದಿದೆ.
ರೂರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹರ್ಮೌ ಬಂಜಾರದೆರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಮಲಗಿದ್ದ ವೇಳೆ ಗುಡಿಸಲಿಗೆ ಬೆಂಕಿ ಬಿದ್ದಿದೆ.
ಸತೀಶ್ ಕುಮಾರ್, ಅವರ ಪತ್ನಿ ಕಾಜಲ್ ಹಾಗೂ ಅವರ ಮೂವರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಕುಟುಂಬ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ ಸತೀಶ್ ಅವರ ತಾಯಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ