Kannada NewsKarnataka NewsLatestPolitics

*ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಕಂಠೀರವ ಹೊರಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣದ ಪರಿಶೀಲನೆ ನಡೆಸಿದರು.

ಅಂದಿನ ಕಾರ್ಯಕ್ರಮಕ್ಕೆ ಅಗತ್ಯವಿರುವ ಸೌಲಭ್ಯಗಳು, ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಉಟೋಪಚಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಲಭ್ಯಗಳ ಕುರಿತು ಸಚಿವರು,‌ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ ಸೇರಿದಂತೆ ಕ್ರೀಡಾಂಗಣದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Home add -Advt

Related Articles

Back to top button