
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರು ಅನಾರೋಗ್ಯದ ಕಾರಣ ಇಂದು ಮುಂಜಾನೆ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. 2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಇಂದು ಸಂಜೆ 4 ಗಂಟೆಗೆ ಕಾಪು ಸಿದ್ದಲಿಂಗಸ್ವಾಮಿ ಅವರ ಅಂತ್ಯಕ್ರಿಯೆಯು ಲಿಂಗಾಯತ ವಿಧಿವಿಧಾನದಂತೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ.
					
				
					
					
					
					
					
					
					

