Karnataka News

*ಇಂದಿನಿಂದ ಮತ್ತೆ ಚುರುಕಾಗಲಿದೆ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮಳೆ ಚುರುಕಾಗಲಿದ್ದು, ಮುಂಗಾರು ಮಳೆಯ ಆರ್ಭಟ ಮತ್ತೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು , ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Back to top button