Kannada NewsKarnataka NewsLatest

*ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಇಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಎನ್ ಆರ್ ಪುರ, ಕೊಪ್ಪ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಳಗಾವಿಯಲ್ಲೂ ಮಳೆ ಜೋರಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button