Kannada NewsKarnataka NewsLatest

*ಮುಂದುವರೆದ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದೆ. ಆಗಸ್ಟ್ ೩ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಮಂಡ್ಯ, ಮೈಸೂರು. ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಧಾರವಾಡ, ಬೆಳಗಾವಿ, ಬೀದರ್, ಬಾಗಲಕೋಟೆ, ಹಾವೇರಿ, ಗದಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button