Kannada NewsKarnataka NewsLatest

*ದುರ್ಬಲಗೊಂಡ ಮುಂಗಾರು: ಆದರೂ ಈ ಜಿಲ್ಲೆಯಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಿದೆ. ಹಾಗಾಗಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 7ರವರೆಗೂ ವ್ಯಾಪಕ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ದಾರಾಣ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬೆಳಗಾವಿ, ಬೀದರ್, ಗದಗ, ಹಾವೇರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಇನ್ನು ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button