Kannada NewsKarnataka NewsLatest

*ತಾಪಮಾನ ತಾಪಮಾನ ಹೆಚ್ಚಳದ ನಡುವೆ ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿಹೆಚ್ಚಳದ ನಡುವೆ ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ನಡುವೆ H5N1 ಹಕ್ಕಿಜ್ವರದ ಭೀತಿ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಸರ್ಕಾರ ಅಧೀನದಲ್ಲಿರುವ ಪೌಲ್ಟ್ರಿಯಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ.

Home add -Advt

ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ. ಕೋಳಿಗಳಲ್ಲಿ ಹಕ್ಕಿ ಜ್ವರದ ಸೋಂಕು ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಫಾರಂ ಅನ್ನು ಮುಚ್ಚಲಾಗಿದ್ದು, ಈ ಪ್ರದೇಶದಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಸ್ಥಗಿತಗೊಳಿಸಲಾಗಿದೆ.

ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಸೋಂಕು ಪಕ್ಷಿಗಳಿಗೆ ಮಾತ್ರವಲ್ಲ, ಮನುಷ್ಯರು ಮತ್ತು ಇತರ ಪ್ರಾಣಿಗಳಲ್ಲಿಯೂ ಕಂಡು ಬರುತ್ತದೆ. ಹಕ್ಕಿ ಜ್ವರದ ಆತಂಕ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಎಚ್ಚರಿಕಾ ನೋಟಿಸ್ ನೀಡಲಾಗಿದೆ. ಕೋಳಿ ಸಾಕಾಣಿಕೆ ಕೇಂದ್ರಗಳು ಹಾಗೂ ಕೋಳಿ ಅಂಗಡಿಗಳಲ್ಲಿ ವಿಶೇಷ ಪರಿಶೀಲನೆ ನಡೆಯುತ್ತಿದೆ. ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಈ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

Related Articles

Back to top button