Karnataka News

*ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ನಿನ್ನೆ ಬೆಂಗಳೂರು ಸೇರಿದಂತೆ ಹಲವೆಡೆ ಆಲಿಕಲ್ಲು, ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ಚಿಕ್ಕಮಗಳೂರು, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಹಾವೇರಿ, ಗದಗ, ಬೀದರ್, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜ್ಯದಲ್ಲಿ ಮಾರ್ಚ್ 28ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಬೆಳಗಾವಿ, ಬೀದರ್ , ವಿಜಯಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ.

Related Articles

Back to top button