Kannada NewsKarnataka NewsLatest

*18 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಕೆಲ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಗದಗ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಲಬುರ್ಗಿಯಲ್ಲಿ 41. 5 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನಿಡಿದೆ.


Related Articles

Back to top button