Latest

ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಮತ್ತೆ ವರುಣಾರ್ಭಟ ಜೋರಾಗಿದ್ದು, ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ 5 ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮುರುಘಾಶ್ರೀಗಳಿಗೆ ಮತ್ತೊಂದು ಸಂಕಷ್ಟ

https://pragati.taskdun.com/latest/murughashreetwo-more-miner-girlssexualy-harrasment-case-filefir/

Related Articles

Back to top button